ಕೂಡಿಗೆ, ಫೆ. 2: ಇಲ್ಲಿಗೆ ಸಮೀಪದ ಅಬ್ಬೂರುಕಟ್ಟೆ ನೇರುಗಳಲೆÉ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿತ್ತಲಮಕ್ಕಿ ಹಾಡಿಯಲ್ಲಿ ಸಡಗರ ಸಂಭ್ರಮದಿಂದ ಶ್ರೀ ಚಾಮುಂಡೇಶ್ವರಿ ಭದ್ರಕಾಳಿ ವಾರ್ಷಿಕ ಪೂಜೋತ್ಸವ ಕಾರ್ಯಕ್ರಮ ನಡೆಯಿತು.
ಪೂಜೋತ್ಸವದ ಅಂಗವಾಗಿ ದೇವಿಗೆ ವಿಶೇಷ ಹೋಮ ಹವನಗಳು ನಡೆದವು. ಹಾಡಿಯ ಜನರು ಹಾಡಿಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದರು. ಈ ಸಂದರ್ಭದಲ್ಲಿ ಬಸವನಹಳ್ಳಿ ಸಹಕಾರ ಸಂಘ ಅಧ್ಯಕ್ಷ ಎಸ್.ಎನ್. ರಾಜಾರಾವ್, ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ, ಹಾಡಿಯ ಪ್ರಮುಖರಾದ ರವಿ, ರಮೇಶ, ಕಾಳಪ್ಪ, ಮಂಜು, ದೀಪಕ್, ದೊಡ್ಡ ಅಪ್ಪು, ಸ್ಥಳೀಯ ಪ್ರಮುಖರಾದ ನಾರಾಯಣ ರೈ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
ಈ ಪೂಜೋತ್ಸವ ಸಂದರ್ಭದಲ್ಲಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ನಂತರ ಅನ್ನದಾನ ಕಾರ್ಯಕ್ರಮ ನಡೆಯಿತು.