ಮಡಿಕೇರಿ, ಫೆ. 2: ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2018-19ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ 8 ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳಿಗೆ 5 ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತಾ. 4 ರಿಂದ 8 ರವರೆಗೆ ಕ್ರೀಡಾ ತರಬೇತಿ ಶಿಬಿರ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ನಡೆಯಲಿದೆ.
ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿಯ ಹಾಗೂ ಪಂಗಡದ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.