ನಾಪೆÇೀಕ್ಲು, ಫೆ. 4: ಸಮಾಜದಲ್ಲಿ ಸಣ್ಣಪುಟ್ಟ ವಿಷಯಗಳಿಗೂ ಪರಸ್ಪರ ದ್ವೇಷ, ಸಂಘರ್ಷಗಳು ಉಂಟಾ ಗುತ್ತಿರುವ ಈ ಕಾಲಘಟ್ಟದಲ್ಲಿ ನಾಪೆÇೀಕ್ಲು ಡೆಕ್ಕನ್ ಯೂತ್ ಕ್ಲಬ್ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಪರಸ್ಪರ ಸಾಮರಸ್ಯ ವೃದ್ಧಿಗೆ ಶ್ರಮಿಸುತ್ತಿದೆ ಎಂದು ಮಡಿಕೇರಿ ತಾಲೂಕು ಕೃಷಿ ಮಾರುಕಟ್ಟೆ ಉತ್ಪನ್ನ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಹೇಳಿದರು.

ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಡೆಕ್ಕನ್ ಯೂತ್ ಕ್ಲಬ್‍ನಿಂದ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮತ್ತೋರ್ವ ಮುಖ್ಯ ಅತಿಥಿ ನಾಪೆÇೀಕ್ಲು ಪೆÇಲೀಸ್ ಠಾಣಾ ಎ.ಎಸ್.ಐ. ವಿಶ್ವನಾಥ್ ಮಾತನಾಡಿ, ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮತ್ತೋರ್ವ ಮುಖ್ಯ ಅತಿಥಿ ನಾಪೆÇೀಕ್ಲು ಪೆÇಲೀಸ್ ಠಾಣಾ ಎ.ಎಸ್.ಐ. ವಿಶ್ವನಾಥ್ ಮಾತನಾಡಿ, ಪ್ರತಿಭೆಗಳಿಗೆ ಅವಕಾಶ ಮಾಡಿ ಕೊಟ್ಟಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಎಂ.ಎ. ಮನ್ಸೂರ್ ಅಲಿ ಮಾತನಾಡಿ, ಈ ವ್ಯಾಪ್ತಿಯ ಕ್ರೀಡಾಪ್ರೇಮಿಗಳ, ದಾನಿಗಳ ಸಹಕಾರದಿಂದ ನಮ್ಮ ಸಂಸ್ಥೆಯು ಕಳೆದ 25 ವರ್ಷಗಳಿಂದ ವಿವಿಧ ಕ್ರೀಡಾ ಕೂಟಗಳನ್ನು ಆಯೋಜಿಸುತ್ತಾ ಬಂದಿದೆ. ಇನ್ನು ಮುಂದೆಯೂ ಎಲ್ಲರೂ ಸಹಕಾರ ನೀಡಬೇಕು ಎಂದರು. ವೇದಿಕೆಯಲ್ಲಿ ಡೆಕ್ಕನ್ ಯೂತ್ ಕ್ಲಬ್‍ನ ಸದಸ್ಯರಾದ ಯೂನಸ್, ಹ್ಯಾರೀಸ್, ಮತ್ತಿತರರು ಇದ್ದರು.