ನಾಪೆÇೀಕ್ಲು, ಫೆ. 3: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ನಾಪೆÇೀಕ್ಲು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಂಟರ್ಯಾಕ್ಟ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೊಡಗಿನ ಅತೀ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಕೈಗೊಳ್ಳಲಾಯಿತು. ಅದರೊಂದಿಗೆ ನಾಲ್ಕುನಾಡು ಅರಮನೆಗೂ ವಿದ್ಯಾರ್ಥಿಗಳು ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಮಡಿಕೇರಿ ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಧನಂಜಯ, ರೋಟರಿ ಮಿಸ್ಟಿ ಹಿಲ್ಸ್ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ, ಪ್ರೌಢಶಾಲಾ ಇಂಟರ್ಯಾಕ್ಟ್ ಕ್ಲಬ್ ಸಂಯೋಜಕಿ ಕೆ.ಬಿ. ಉಷಾ ರಾಣಿ, ಮತ್ತಿತರರು ಇದ್ದರು.