ಮಡಿಕೇರಿ, ಫೆ. 3: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕಾರ್ಮಿಕ ಇಲಾಖೆಯು ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ 11 ವಲಯಗಳ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಉದ್ದೇಶಿಸಿದೆ.

ಅಸಂಘಟಿತ ಕಾರ್ಮಿಕ ವಲಯದಲ್ಲಿ ಕೆಲಸ ಮಾಡಲು ಹಮಾಲರು, ಚಿಂದಿ ಆಯುವವರು, ಟೈಲರ್‍ಗಳು, ಮನೆ ಕೆಲಸದವರು, ಕ್ಷೌರಿಕರು, ಮರಗೆಲಸ ಮಾಡುವವರು, ದೋಬಿ, ಕುಂಬಾರಿಕೆ, ಅಕ್ಕಸಾಲಿಗರು, ಮೆಕ್ಯಾನಿಕ್ ಮತ್ತು ಮಂಡಕ್ಕಿ ಭಟ್ಟಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕಾರ್ಮಿಕರು ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿಯ ಎಲ್ಲಾ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರುಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಭರ್ತಿ ಮಾಡಿ ತಾ. 5 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಈ ವಲಯಗಳ ನೋಂದಣಿಗಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರು ನಮೂನೆ-5 ರಲ್ಲಿ ‘ಕಾರ್ಮಿಕ ಸನ್ಮಾನಕ್ಕಾಗಿ’ ಅರ್ಜಿಯನ್ನು ತಾ. 5 ರೊಳಗೆ ಸಲ್ಲಿಸಲು ಮಡಿಕೇರಿ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.