ಮಡಿಕೇರಿ, ಫೆ. 3: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಮೇಜರ್ ರಾಘವ ಇವರು ಡಾ. ರಾಮದಾಸ ಪ್ರಭು ಇವರ ಮಾರ್ಗದರ್ಶನದಲ್ಲಿ ಪಿ.ಹೆಚ್.ಡಿ. ಪದವಿಗಾಗಿ ಮಂಡಿಸಿರುವ ‘ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಆದಿವಾಸಿಗಳ ಬದುಕು’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಪ್ರಸ್ತುತ ಇವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು (ಮಂಗಳೂರು ವಿಶ್ವವಿದ್ಯಾನಿಲಯ ಅಧೀನ ಕಾಲೇಜು) ಇಲ್ಲಿ ಇತಿಹಾಸ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.