ಮಡಿಕೇರಿ, ಫೆ. 4: ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗದಿಂದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಮತ್ತು ಮಾಜಿ ಸಚಿವ ವಿಜಯಶಂಕರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಿಯೋಗ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಈ ಬಗ್ಗೆ ವಿವರಿಸಿದರು. ಈ ಹಿಂದೆ ರೂ. 50 ಕೋಟಿ ಪ್ಯಾಕೆಜ್ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಅಂತಿಮಗೊಳಿಸಿದ್ದ ಕಾಮಗಾರಿಯನ್ನು ಮುಂದುವರಿಸುವ ಭರವಸೆ ನೀಡಿದರು. ಗೃಹ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ದೇಶಪಾಂಡೆ ಮುಂದಿನ ತಿಂಗಳಿನಲ್ಲಿ ಕೊಡಗಿಗೆ ಆಗಮಿಸಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗುವದ್ದಾಗಿ ಸಿದ್ದರಾಮಯ್ಯ ತಿಳಿಸಿದರು. ನಿಯೋಗದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಓಂಕಾರೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಪುಲಿಯಂಡ ಜಗದೀಶ್, ಕಕ್ಕಬೆ ವಲಯಾಧ್ಯಕ್ಷ ಲವ, ಪ್ರಭುರೈ, ನರೇನ್ ಸುಬ್ಬಯ್ಯ, ಗಿರಿ, ಕಿಶನ್ ಸೇರಿದಂತೆ ಮುಖಂಡರು ಭಾಗಿಯಾಗಿದ್ದರು.