ಕೊಡಗು ಜಿಲ್ಲಾ ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಣಿವೆ ಗ್ರಾಮದ ಮುಖ್ಯಬೀದಿಯಲ್ಲಿ ನಡೆಯಿತು.ಹುಲುಸೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಬಳಿಯಿಂದ ಆರಂಭಗೊಂಡ ಕೊಡಗು ಜಿಲ್ಲಾ ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಣಿವೆ ಗ್ರಾಮದ ಮುಖ್ಯಬೀದಿಯಲ್ಲಿ ನಡೆಯಿತು.ಹುಲುಸೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಬಳಿಯಿಂದ ಆರಂಭಗೊಂಡ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯ, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅವರ ಮೆರವಣಿಗೆ ನಡೆಯಿತು. ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಗ್ರಾಮಸ್ಥರು, ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಪರಿಷತ್‍ನ ಪ್ರಮುಖರು ಪಾಲ್ಗೊಂಡಿದ್ದರು.ರಾಮಲಿಂಗೇಶ್ವರ ದೇವಾಲಯ ಆವರಣದಲ್ಲಿ ನಡೆದ ಸಮ್ಮೇಳನದಲ್ಲಿ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಪರಿಷತ್ ಧ್ವಜಾರೋಹಣ ನೆರವೇರಿಸ ಲಾಯಿತು. ಶ್ರೀಮತಿ ದೇಶಕೊಡಿ ಕೂಸಕ್ಕ ದ್ವಾರ, ಕೂತಂಡ ಪಾರ್ವತಿ ದ್ವಾರ, ಸಾಕಮ್ಮ ಮುಖ್ಯದ್ವಾರಗಳ ಉದ್ಘಾಟನೆ ನಡೆಯಿತು.