ಶನಿವಾರಸಂತೆ, ಫೆ. 5: ಗುಡುಗಳಲೆ ಜಯದೇವ ಜಾನುವಾರು ಜಾತ್ರೆ ಪ್ರಯುಕ್ತ ಜಾತ್ರಾ ಮೈದಾನದಲ್ಲಿ ತಾ. 6 ಹಾಗೂ 7ರಂದು ಸಂಜೆ 6.30 ರಿಂದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಪ್ರಥಮ ಬಹುಮಾನ ರೂ. 25,000 ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ರೂ. 12,500 ಹಾಗೂ ಟ್ರೋಫಿ, ತೃತೀಯ ಬಹುಮಾನ ರೂ. 8000 ಹಾಗೂ ಟ್ರೋಫಿ ನೀಡಲಾಗುವದು.
ಪಂದ್ಯಾಟವನ್ನು ಉದ್ಯಮಿ ಪವನ್ ದೇವಯ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾದಿ ಉದ್ಯಮಿ ರಾಜೀವ್, ಗುಡುಗಳಲೆ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಉದ್ಯಮಿ ಹರಪಳ್ಳಿ ರವೀಂದ್ರ, ತಾ.ಪಂ. ಸದಸ್ಯ ಅನಂತ್‍ಕುಮಾರ್, ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸಂದೀಪ್, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಗೌಸ್, ಜಾತ್ರಾ ಸಮಿತಿ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷೆ ವಾಣಿ ಗಿರೀಶ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.