ಮಡಿಕೇರಿ, ಫೆ. 5: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಮೈಸೂರು ವಿಭಾಗಕ್ಕೆ ಸಂಚಾಲಕರು, ಸಹ ಸಂಚಾಲಕರನ್ನು ನೇಮಕ ಮಾಡಲಾಗಿದ್ದು, ಕೊಡಗು ಜಿಲ್ಲೆಯಿಂದ ಎಸ್.ಜಿ. ಅಯ್ಯಪ್ಪ ಅವರನ್ನು ನೇಮಕಾತಿ ಮಾಡಲಾಗಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ನಟರಾಜಗೌಡ ತಿಳಿಸಿದ್ದಾರೆ.