ಮಡಿಕೇರಿ, ಫೆ.6 : ನಗರದ ಮಹದೇವಪೇಟೆಯಲ್ಲಿರುವ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದ 5ನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮ ತಾ.7ರಂದು (ಇಂದು) ನಡೆಯಲಿದೆ.
ದಿನದ ಅಂಗವಾಗಿ ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ನವಗ್ರಹ ಹೋಮ, ವಾಸವಿ ಹೋಮ, 8 ಗಂಟೆಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಜರುಗಲಿದೆ ಎಂದು ದೇವಾಲಯದ ಆಡಳಿತಮಂಡಳಿ ಪ್ರಕಟಣೆ ತಿಳಿಸಿದೆ.