ನಾಪೆÇೀಕ್ಲು, ಫೆ. 6: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ 59 ಸೈಕಲ್‍ಗಳನ್ನು ನಾಪೆÇೀಕ್ಲು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಜಿ.ಪಂ. ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರಕಾರದ ಸವಲತ್ತುಗಳನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ನಾಪೆÇೀಕ್ಲು ಗ್ರಾ.ಪಂ. ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಸದಸ್ಯ ಮಾಚೆಟ್ಟಿರ ಕುಶು ಕುಶಾಲಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ಲಾ, ಉಪ ಪ್ರಾಂಶುಪಾಲೆ ಪಿ.ಕೆ. ನಳಿನಿ, ಶಿಕ್ಷಕರಾದ ಮಹಂತೇಶ್ ಕೋಠಿ, ಸದಾನಂದ, ಬಂಡೇಪ್ಪ ಕೋಟಾಲೆ, ಎಂ.ಸಿ. ಅಶ್ವಿನಿ, ಬಿ.ಕೆ. ಗಂಗಮ್ಮ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೆÇೀಷಕರು ಇದ್ದರು.