ಮಡಿಕೇರಿ, ಫೆ. 7: ಮಡಿಕೇರಿಯ ಶ್ರೀರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ನಿಯಮ ಹಾಗೂ ಸುರಕ್ಷತಾ ಕಾರ್ಯಕ್ರಮದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಎ.ಎಸ್.ಐ. ಮಹದೇವಯ್ಯ ಅವರು ಈ ವಿಚಾರದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು, ಪೋಷಕರು, ವಿದ್ಯಾಸಂಸ್ಥೆಯ ಸಿಬ್ಬಂದಿಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗೋವಿಂದ ಸ್ವಾಮಿ, ಕಾರ್ಯದರ್ಶಿ ಸಚಿನ್ ಪಾಲ್ಗೊಂಡಿದ್ದರು.