ಮಡಿಕೇರಿ, ಫೆ. 9: ಕೊಡಗು ಜಿಲ್ಲೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ತಾ. 10 ರಂದು (ಇಂದು) ಸಂಜೆ 4.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಶಾರೀರಿಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಶಾರೀರಿಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮೇಜರ್ ವೆಂಕಟಗಿರಿ ಅವರು ವಹಿಸಲಿದ್ದಾರೆ. ಸಂಘದ ಜಿಲ್ಲಾ ಸಂಘಚಾಲಕ್ ಚಕ್ಕೇರ ಮನು ಕಾವೇರಪ್ಪ ಹಾಗೂ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಟಕಣೆ ತಿಳಿಸಿದೆ.