ಭಾಗಮಂಡಲ, ಫೆ. 10: ಇಲ್ಲಿನ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘದಲ್ಲಿ ಕಳೆದ ಮೂವತ್ತೈದು ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಬಾಬು ರೈ ನಿವೃತ್ತರಾದರು. ಇವರನ್ನು ಸಂಘದ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಹೊಸೂರು ಸತೀಶ್‍ಕುಮಾರ್ ಉಪಾಧ್ಯಕ್ಷ ವಿಠಲ, ಕಾರ್ಯನಿರ್ವಹಣಾಧಿಕಾರಿ ನಿಡ್ಯಮಲೆ ಅಶೋಕ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.