ಪೊನ್ನಂಪೇಟೆ: ಹಾತೂರು ಪ್ರೌಢಶಾಲೆಯಲ್ಲಿ 8ನೇ ತರಗತಿ ಮಕ್ಕಳಿಗೆ ಬೈಸಿಕಲ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎಂ. ಸುಬ್ರಮಣಿ ವಹಿಸಿ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಮುಂದೆ ಬರಬೇಕೆಂದರು.
ಸಭೆಯಲ್ಲಿ ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್. ಜಯಂತಿ, ಸೆಕೆಂಡರಿ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಕೆ.ಎಂ. ಮುದ್ದಪ್ಪ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜೆ. ಮಹದೇವ ಸ್ವಾಗತಿಸಿ, ವಂದಿಸಿದರು.*ಗೋಣಿಕೊಪ್ಪಲು: ಇಲ್ಲಿನ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದರು.
ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಚಿಣ್ಣಪ್ಪ, ಮುಖ್ಯೋಪಾಧ್ಯಾಯ ರತೀಶ್ರೈ, ಸಹ ಶಿಕ್ಷಕ ಕೃಷ್ಣ ಚೈತನ್ಯ ಹಾಜರಿದ್ದರು.ಕೂಡಿಗೆ: ನಂಜರಾಯಪಟ್ಟಣ ಪ್ರೌಢಶಾಲೆಯಲ್ಲಿ ಸರಕಾರದಿಂದ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿವರಿಸಲಾಯಿತು. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜೈನಭಾ ನೆರವೇರಿಸಿದರು. ಈ ಸಂದರ್ಭ ಪ್ರೌಢಶಾಲಾ ಕಾರ್ಯದರ್ಶಿ ಎಸ್.ಬಿ. ನಂದಕುಮಾರ್, ಶಾಲಾ ಮುಖ್ಯ ಶಿಕ್ಷಕ ಹೆಚ್.ಬಿ. ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.ಮರಗೋಡು: ಇಲ್ಲಿನ ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸೈಕಲ್ಗಳನ್ನು ಭಾರತಿ ಹೈಸ್ಕೂಲ್ ಸೊಸೈಟಿ ಆಡಳಿತ ಮಂಡಳಿ ಅಧ್ಯಕ್ಷ ಬಿ.ಪಿ. ಕಾವೇರಪ್ಪ ವಿತರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತ, ಪಿ.ಡಿ.ಓ. ಆಶಾಕುಮಾರಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಂ. ವಾಸಯ್ಯ, ನಿರ್ದೇಶಕರಾದ ಬಿ. ವಿಶ್ವನಾಥ್, ಪಿ. ಮಂದಪ್ಪ, ಕೆ. ಸಿದ್ದಾರ್ಥ, ಹಿರಿಯ ಶಿಕ್ಷಕಿ ಎಂ.ಪಿ. ವೀಣಾ, ಪ್ರಾಂಶುಪಾಲ ಹೆಚ್.ಬಿ. ಬೆಳ್ಯಪ್ಪ ಉಪಸ್ಥಿತರಿದ್ದರು.