ಮಡಿಕೇರಿ, ಫೆ. 12: ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಜೀವ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಎಂ. ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಸಾಂಕೇತಿಕವಾಗಿ ನೀಡಲಾಯಿತು. ನಂತರ ನಡೆದ ಸಭೆಯಲ್ಲಿ ಎಂ. ಎಂ. ಪರಮೇಶ್ವರ್ ಮಾತನಾಡಿ, ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕಿದೆ. ಸಂಘದ ಪ್ರತಿ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಮಾಜಿಕ ಕಾರ್ಯಕ್ಕೆ ಪದಾಧಿಕಾರಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್.ನಾಯ್ಕ್, ಸಂಘದ ಹಿರಿಯ ಸಲಹೆಗಾರ ಬಾಬು ನಾಯ್ಕ್, ಸಹಕಾರ್ಯದರ್ಶಿ ಮೋಹನ್ ಕುಮಾರ್, ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಎಸ್. ದಿವ್ಯಕುಮಾರ್, ಯುವಕ ಸಂಘದ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್. ಯೋಗೇಂದ್ರ, ಪ್ರಮುಖರಾದ ಎಂ.ಟಿ. ಗುರುವಪ್ಪ, ಕೋಶಾಧಿಕಾರಿ ಕಾಂತಿ ಯೋಗೇಂದ್ರ, ಯುವ ವೇದಿಕೆ ಸದಸ್ಯರಾದ ಎಂ.ಟಿ. ನವೀನ್, ಎಂ.ಎಸ್. ಗಣೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.