ಕೂಡಿಗೆ, ಫೆ. 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಕೂಡುಮಂಗಳೂರು ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ನಡೆಯಿತು. ಅರ್ಚಕ ಪರಮೇಶ್ವರ ಭಟ್ ಪೂಜಾ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು.

ಬಸವ ಕೇಂದ್ರ ಮುರುಘಮಠ ರಾವಂದೂರಿನ ಮೋಕ್ಷಪತಿ ಮಹಾ ಸ್ವಾಮಿಗಳು ಆಶೀರ್ವಚನ ನೀಡಿ ಮಾನವನ ಜೀವನದಲ್ಲಿ ದೇವರ ಮೇಲಿನ ನಂಬಿಕೆ ಸದಾಚಾರಗಳು ಉತ್ತಮ ಸಂಸ್ಕೃತಿಯನ್ನು ರೂಢಿಸು ವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರು ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಸಜ್ಜನರಾಗಿ ಪಾಲ್ಗೊಂಡು ಕಾರ್ಯಕ್ರಮದ ಪ್ರಯೋಜನ ಪಡೆದು ಕೊಳ್ಳುವಂತೆ ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಪ್ರಕಾಶ್ ವೈ ಸಂಘದ ಮೂಲಕ ಸದಸ್ಯರುಗಳಲ್ಲಿ ಶಿಸ್ತು ಸಮಯ ಪಾಲನೆ ರೂಢಿಸಿಕೊಂಡಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮ ಗಳನ್ನು ಯಶಸ್ವಿಯಾಗಿ ಸಂಘಟಿಸಲು ಸಾಧ್ಯವಾಗುತ್ತದೆ.

ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಡಿ. ಎಸ್. ಗಣೇಶ್, ಒಕ್ಕೂಟದ ಅಧ್ಯಕ್ಷರುಗಳಾದ ಗಿರೀಶ್ ರಾಧಾ ಪ್ರಕಾಶ್ ಪಂಚಾಯತ್ ಸದಸ್ಯರು ಗಳಾದ ಪಾರ್ವತಮ್ಮ ಸುರೇಶ್ ಹಾಗೂ ಒಕ್ಕೂಟದ ಪದಾಧಿಕಾರಿ ಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಅಧ್ಶಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಮಾತನಾಡಿದರು. ಶುಭಹಾರೈಸಿ ದರು. ಸೇವಾ ಪ್ರತಿನಿಧಿ ನಿರ್ಮಲಾ ಸ್ವಾಗತಿಸಿ ಒಕ್ಕೂಟದ ಕಾರ್ಯದರ್ಶಿ ಅರುಣಾಕ್ಷಿ ವಂದಿಸಿದರು.

ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿ ದರು.