ಸೋಮವಾರಪೇಟೆ, ಫೆ. 12: ಅಡುಗೆ ಅನಿಲ ಬಳಕೆದಾರರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಇಲ್ಲಿನ ಬೇಳೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಎಲ್ಪಿಜಿ ಪಂಚಾಯಿತಿ ಮತ್ತು ಎರಡನೇ ಹಂತದ ಉಜ್ವಲ ಗ್ಯಾಸ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಪ್ರಸ್ತುತ ಬಿಪಿಎಲ್ ಹೊಂದಿರುವ ಎಲ್ಲಾ ವರ್ಗದ ಮಹಿಳೆಯರಿಗೆ ಅಡುಗೆ ಅನಿಲ ಸಂಪರ್ಕವನ್ನು ಉಚಿತವಾಗಿ ನೀಡುತ್ತಿದೆ. ಈ ಹಿನ್ನೆಲೆ ಫಲಾನು ಭವಿಗಳು ಹಾಗೂ ಬಳಕೆದಾರರು ಅತ್ಯಂತ ಜಾಗರೂಕತೆಯಿಂದ ಅಡುಗೆ ಅನಿಲ ಬಳಸಬೇಕು ಎಂದು ಸಲಹೆ ನೀಡಿದರು.
ನಂತರ ಸಭೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಮಲ, ಶೋಭಾ ಅವರು ಸೌದೆ ಬಳಕೆಯಿಂದಾಗುವ ದುಷ್ಪರಿ ಣಾಮಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಇದೇ ವೇಳೆ ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ಸತೀಶ್ ಸುರಕ್ಷತಾ ಶಿಬಿರವನ್ನು ನಡೆಸಿಕೊಟ್ಟರು.
ಈ ಸಂದರ್ಭ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ಬೇಳೂರು ಗ್ರಾ.ಪಂ. ಸದಸ್ಯರುಗಳಾದ ಕೆ.ಎ. ಯಾಕೂಬ್, ಯೋಗೇಂದ್ರ, ಕವಿತ, ವೀಣಾ ರಮೇಶ್, ಐಗೂರಿನ ಪಾರ್ವತಿ ಹೆಚ್ಪಿ ಗ್ಯಾಸ್ ಏಜೆನ್ಸಿ ಮಾಲೀಕ ಎಸ್.ಎ. ಮುರಳೀಧರ್ ಉಪಸ್ಥಿತರಿದ್ದರು.