ಸೋಮವಾರಪೇಟೆ, ಫೆ. 12: ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದ ಆಶ್ರಯದಲ್ಲಿ ತಲ್ತರೆಶೆಟ್ಟಳ್ಳಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಸುನಂದ ವಹಿಸಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಅಪ್ಪಯ್ಯ, ಗ್ರಾಮಾಧ್ಯಕ್ಷ ಬಿ.ಪಿ. ಲಿಂಗರಾಜು, ಸ್ತ್ರೀ ಶಕ್ತಿ ಸಂಘದ ಸುನೀತಾ, ಪ್ರಕೃತಿ ಸಾಹಿತ್ಯ ಬಳಗದ ಅಧ್ಯಕ್ಷೆ ರಾಧಿಕ ಕಾಳಪ್ಪ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.