ಮಡಿಕೇರಿ, ಫೆ. 12: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಂಗದ ಶಾಲಾ ವಾರ್ಷಿಕೋತ್ಸವ ಹಾಗೂ ಶಿಕ್ಷಕಿ ಎಂ.ಟಿ. ಧರಣಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಫೌಸಿಯಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್‍ಕಾರ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕೆ.ಜೆ. ಪ್ರಕಾಶ್ ಮತ್ತಿತರ ಗಣ್ಯರು ಹಾಜರಿದ್ದರು.

ದೈಹಿಕ ಶಿಕ್ಷಕ ಬಿ.ಎ. ಉತ್ತಪ್ಪ ಸ್ವಾಗತಿಸಿದರೆ, ಮುಖ್ಯ ಶಿಕ್ಷಕಿ ವೈ.ಎ. ತಂಗಮ್ಮ ವರದಿ ವಾಚಿಸಿದರು. ವತ್ಸಲಾ ಎ. ವಂದನಾರ್ಪಣೆ ಮಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು. ಶಿಕ್ಷಕಿ ಬಬಿತ ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು.