ಮಡಿಕೇರಿ, ಫೆ. 13: ಮಡಿಕೇರಿ ಜಿಲ್ಲಾಸ್ಪತ್ರೆಯ ಗುತ್ತಿಗೆ ಆರೋಗ್ಯ ಸಿಬ್ಬಂದಿಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿ ಸರ್ಕಾರ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಜಿಲ್ಲಾಸ್ಪತ್ರೆಯ ಎದುರು ಮುಷ್ಕರ ನಡೆಸಿದರು.

ಆರೋಗ್ಯ ಇಲಾಖೆಯ ರಾಜ್ಯ ಗುತ್ತಿಗೆ ನೌಕರರ ಸಂಘ ತಾ. 10 ರಿಂದ ರಾಜ್ಯವ್ಯಾಪ್ತಿ ಮುಷ್ಕರಕ್ಕೆ ಕರೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿತ್ತು.