ಗೋಣಿಕೊಪ್ಪ ವರದಿ, ಫೆ. 15: ಬಾಳೆಲೆ ವಿಜಯಲಕ್ಷ್ಮೀ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಕಾಡ್ಯಮಾಡ ಪಿ. ಪೊನ್ನಮ್ಮ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಎಂ. ಬೋಸ್, ಸೊಸೈಟಿ ಮಾಜಿ ಅಧ್ಯಕ್ಷ ಪೋಡಮಾಡ ಚಿಣ್ಣಪ್ಪ, ಮಾಜಿ ಅಧ್ಯಕ್ಷ ಆದೇಂಗಡ ಎನ್. ಅಶೋಕ್, ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ, ಮಾಜಿ ಅಧ್ಯಕ್ಷ ಪಾರುವಂಗಡ ಪೆಮ್ಮಯ್ಯ, ಬಾಳೆಲೆ ಕೊಡವ ಸಮಾಜದ ಅಧ್ಯಕ್ಷ ಮಲ್ಚೀರ ಬೋಸ್ ಚಿಟ್ಟಿಯಪ್ಪ, ಉಪಾಧ್ಯಕ್ಷ ಕೆ.ಎಸ್. ಉದಯ ಉತ್ತಪ್ಪ ಹಾಗೂ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಉಪಸ್ಥಿತರಿದ್ದರು.