ಶನಿವಾರಸಂತೆ, ಫೆ. 15: ಸಮೀಪದ ಕೊಡ್ಲಿಪೇಟೆಯ ಬಸ್ ನಿಲ್ದಾಣದ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ವಹಣಾ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಸುಬ್ರಮಣ್ಯ ಹಾಗೂ ಸದಸ್ಯರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜು, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕೆ.ಕೆ. ಮಂಜುನಾಥ್ ಕುಮಾರ್, ದಲಿತ ಒಕ್ಕೂಟ ತಾಲೂಕು ಅಧ್ಯಕ್ಷ ಸುರೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಸದಸ್ಯ ಕುಶಾಲಪ್ಪ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಔರಂಗಜೇಬ್, ಹೋಬಳಿ ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮೌರ್ಯ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೂವಯ್ಯ, ಹೋಬಳಿ ಅಧ್ಯಕ್ಷ ಪ್ರಸನ್ನ, ಬ್ಯಾಡಗೊಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ತಾಲೂಕು ದಲಿತ ಒಕ್ಕೂಟದ ಕಾರ್ಯದರ್ಶಿ ಜಗದೀಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಜಯ್, ಸದಸ್ಯರು, ವಕೀಲ ದೌಲತ್ ಹುಸೇನ್, ರಿಜ್ವಾನ್, ಹೊನ್ನಮ್ಮ, ಆಟೋ ಚಾಲಕರ ಸಂಘದ ಅಧ್ಯಕ್ಷ ಸೋಮಣ್ಣ, ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಗೋವಿಂದ್ ರಾಜ್, ಕಾರ್ಯದರ್ಶಿ ಜನಾರ್ದನ್, ಸದಸ್ಯರು, ವಸಂತ್, ಸತೀಶ್, ಹೋಬಳಿ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.