ಮಡಿಕೇರಿ, ಫೆ. 15: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ದುರಸ್ತಿ ಕಾಮಗಾರಿಗಳು ಮತ್ತು ಪರಿಹಾರ ವಿತರಣೆ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ಪಡೆದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಣ್ಣೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ್ ಇತರರು ಇದ್ದರು. ಲೋಕೋಪಯೋಗಿ, ಜಿ.ಪಂ.ಇಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.