ಮಡಿಕೇರಿ, ಫೆ. 17: ಕಾಲೇಜು ಶಿಕ್ಷಣ ಇಲಾಖೆ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯಶಾಸ್ತ್ರ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಪ್ರಯುಕ್ತ ತಾ. 20 ರಂದು ಕಾಲೇಜು ಸಭಾಂಗಣದಲ್ಲಿ ರಾಜ್ಯಶಾಸ್ತ್ರದ ಸಮಕಾಲೀನ ಸಮಸ್ಯೆಗಳು ಮತ್ತು ಸವಾಲುಗಳು ಎಂಬ ವಿಷಯದಡಿ ರಾಜ್ಯಶಾಸ್ತ್ರದ ಬೆಳಕು ಭಿತ್ತಿಪತ್ರಿಕೆಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಒಂದು ದಿನದ ವಿಚಾರಗೋಷ್ಠಿ ನಡೆಯಲಿದೆ. ತಾ. 20 ರಂದು ಬೆಳಿಗ್ಗೆ 9.45 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಪಿ.ಎಲ್. ಧರ್ಮ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಿಗ್ಗೆ 10.30 ಗಂಟೆಗೆ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ 1.30 ಗಂಟೆಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ನಡೆಯಲಿದೆ. ನಂತರ ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮಡಿಕೇರಿ ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಇತರರು ಭಾಗವಹಿಸಲಿದ್ದಾರೆ.