ಮೂರ್ನಾಡು, ಫೆ. 19: ಇಲ್ಲಿಗೆ ಸಮೀಪದ ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ಗಣಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಾಲೆಯ ಕೆ.ಎಂ. ಶ್ರೀವತ್ಸ ಮತ್ತು ಕೆ.ಬಿ. ಬಿದ್ದಪ್ಪ ಅವರುಗಳು ವಿಜೇತರಾಗಿ ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಕೆ.ಎಸ್. ರಾಮಮೂರ್ತಿ ತಿಳಿಸಿದ್ದಾರೆ.