ಕುಶಾಲನಗರ, ಫೆ. 19: ಕುಶಾಲನಗರ ಪ್ರೀಮಿಯರ್ ಕ್ರಿಕೆಟ್ ಲೀಗ್ ಬಿಡ್ಡಿಂಗ್ ಪ್ರಕ್ರಿಯೆ ನಡೆಯಿತು. ಸ್ಥಳೀಯ ಕಾವೇರಿ ಯುವಕ ಸಂಘದ ಆಶ್ರಯದಲ್ಲಿ ನಡೆಯಲಿರುವ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಆಟಗಾರರ ಆಯ್ಕೆ ನಡೆದಿದ್ದು, ತಾ. 23 ರಿಂದ ಕುಶಾಲನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ.