ಮಡಿಕೇರಿ, ಫೆ.19 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾನೂನು ಶಿಬಿರ ಕಾರ್ಯಕ್ರಮವು ತಾ. 20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವಿ.ವಿ.ಮಲ್ಲಾಪುರ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜೆನ್ನಿಫರ್ ಲೋಲಿಟಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಪಿ.ಯು.ಪ್ರೀತಂ, ವಕೀಲ ಎಂ.ಎ.ನಿರಂಜನ್ ಇತರರು ಪಾಲ್ಗೊಳ್ಳಲಿದ್ದಾರೆ.