ಮಡಿಕೇರಿ, ಫೆ.19 : ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ತಾ. 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ರಾಜಾಸೀಟ್, ಹೊಸಬಡಾವಣೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಡೈರಿ ಫಾರಂ, ಎಫ್.ಎಂ.ಸಿ., ಗಾಳಿಬೀಡು, ಕಾಲೂರು, ಕ್ಲಬ್ ಮಹೇಂದ್ರ ಒಂದನೇ ಮೊಣ್ಣಂಗೇರಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಪ್ರಕಟಣೆ ಕೋರಿದೆ.