ಮಡಿಕೇರಿ, ಫೆ. 19: ಜಿಲ್ಲಾಡಳಿತ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗ ದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ತಾ. 23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐ.ಟಿ.ಐ., ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು hಣಣಠಿ://ಞoಜಚಿgu.ಟಿiಛಿ.iಟಿ ಅಂತರ್ಜಾಲ ತಾಣದಲ್ಲಿರುವ ಎನ್‍ಸಿಎಸ್ ಜಾಬ್ ಪೇರ್ ಎಂಬ ಲಿಂಕ್‍ನ್ನು ಬಳಸಿ ಕೊಂಡು ತಾ. 18 ರಿಂದ ನೋಂದಾ ಯಿಸಿಕೊಳ್ಳುವದು. ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳದ ಅಭ್ಯರ್ಥಿ ಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಉದ್ಯೋಗಾ ಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತ ವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಟ 10 ಸ್ವಯಂ ವಿವರ (ಬಯೋ ಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾ ಗುವದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ದೂರವಾಣಿ: 08272-225851, ಪ್ರಾಂಶು ಪಾಲರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ), ಪೊನ್ನಂಪೇಟೆ ದೂ.ಸಂ: 9880252218 ನ್ನು ಸಂಪರ್ಕಿಸಬಹುದು.