ಮಡಿಕೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ.ಪಿ. ಬಾಣೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದಿಂದ ದೊರೆತ ಉಚಿತ ಸೈಕಲ್ಗಳನ್ನು ಇತ್ತೀಚೆಗೆ ಕಕ್ಕಬೆ ಗ್ರಾಮ ಪಂಚಾಯಿತಿ ಸದಸ್ಯ ಪಯ್ಯಡಿ ಮೂಸಾ ವಿತರಿಸಿದರು. ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.*ಗೋಣಿಕೊಪ್ಪಲು: ಹುದಿಕೇರಿ ಜನತ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸ್ಥಳೀಯ ಗ್ರಾ.ಪಂ. ಅಧ್ಯಕ್ಷೆ ಸುಧಾ ಸೈಕಲ್ಗಳನ್ನು ವಿತರಿಸಿದರು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂಗುಲಂಡ ಸೂರಜ್, ಶಾಲಾ ಮುಖ್ಯೋಪಾಧ್ಯಾಯಿನಿ ಸಿ.ಕೆ. ಮೋಹನಕುಮಾರಿ ಹಾಜರಿದ್ದರು.