ಚೆಟ್ಟಳ್ಳಿ, ಫೆ. 20: ಉಜ್ವಲ ಯೋಜನೆಡಿಯಲ್ಲಿ ಪಾಲಿಬೆಟ್ಟ ಪಂಚಾಯಿತಿ ವ್ಯಾಪ್ತಿಯ 42 ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ವಿತರಿಸಲಾಯಿತು.

ಸಮುದಾಯ ಭವನದಲ್ಲಿ ನಡೆದ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ ಬೋಪಯ್ಯ ಮಾತನಾಡಿ, ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಉಚಿತವಾಗಿ ಅಡುಗೆ ಅನಿಲಗಳನ್ನು ವಿತರಣೆ ಮಾಡುತ್ತಿದ್ದು ಇದರ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕೆಂದರು.

ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಇಂದಿರಾ, ಸದಸ್ಯರಾದ ಬಾಬು, ಕುಟ್ಟಂಡ ದೀಪಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಗ್ಯಾಸ್ ಏಜೆನ್ಸಿಯ ಮಾಲೀಕ ವಿಷ್ಣು ಮತ್ತು ಫಲಾನುಭವಿಗಳು ಹಾಜರಿದ್ದರು.