ಮಡಿಕೇರಿ, ಫೆ. 20: ಪ್ರಸಕ್ತ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯನ್ನು ತಾ. 22 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಸಲಾಗುವದು.
ಗಣತಿ ಕಾರ್ಯ ನಡೆಯುವ ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಈ ಗಣತಿ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಸಮೀಕ್ಷೆಗೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೊಡಗು ವಿಭಾಗದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.