ಗೋಣಿಕೊಪ್ಪಲು, ಫೆ.20 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಹಿಮಾಲಯ ಪೌಂಡೇಷನ್ ವತಿಯಿಂದ ಕನ್ನಡ ನಾಡು, ನುಡಿ, ಕಾವೇರಿ ಜಲ,ವನಸಿರಿ, ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಗೋಣಿಕೊಪ್ಪಲುವಿನ ಹಿರಿಯ ವರ್ತಕರು ಹಾಗೂ ಚಿನ್ನ ಬೆಳ್ಳಿ ವರ್ತಕರ ಸಂಘದ ಪ್ರಮುಖ ಎಂ.ಜಿ. ನಾರಾಯಣ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಲಾಗಿದೆ. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಹಿಮಾಲಯ ಪೌಂಡೇಷನ್‍ನ ಅಧ್ಯಕ್ಷ ಎನ್.ಅನಂತ್ ಹಾಗೂ ಪ್ರಮುಖರು ಹಾಜರಿದ್ದರು.