ಮಡಿಕೇರಿ, ಫೆ. 20: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಘಟಕದ ವಾರ್ಷಿಕ ಮಹಾಸಭೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಜಿಲ್ಲಾಧ್ಯಕ್ಷೆ ಮತ್ತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಜರುಗಲಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಘಟಕದ ಗೌರವ ಕಾರ್ಯದರ್ಶಿ ಹೆಚ್.ಆರ್. ಮುರಳೀಧರ್ ತಿಳಿಸಿದ್ದಾರೆ.