ಸೋಮವಾರಪೇಟೆ, ಫೆ. 20: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಸಮೀಪದ ಹಾನಗಲ್ಲು ಮತ್ತು ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ 37 ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕಗಳನ್ನು ವಿತರಿಸಲಾಯಿತು.

ಆಲೇಕಟ್ಟೆ ಭಾರತೀಯ ಯುವಕ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಹಾನಗಲ್ಲು ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಯುವಕ ಸಂಘದ ಅಧ್ಯಕ್ಷ ಶ್ರೀಕಾಂತ್ ಮುತ್ತಣ್ಣ, ಚೌಡ್ಲು ಗ್ರಾ.ಪಂ. ಸದಸ್ಯರುಗಳಾದ ಮಂಜುಳಾ ಸುಬ್ರಮಣಿ, ಧರ್ಮ, ಸಿ.ಸಿ. ನಂದ, ಪಾರ್ವತಿ ಗ್ಯಾಸ್ ಏಜೆನ್ಸಿ ಮಾಲೀಕರಾದ ಸರಿತ ಮುರುಳೀಧರ್ ಉಪಸ್ಥಿತರಿದ್ದರು.