ನಾಪೆÇೀಕ್ಲು, ಫೆ. 20: ಸಮೀಪದ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪೆÇಲೀಸರು ಮೃತ ದೇಹವನ್ನು ಪರಿಶೀಲಿಸಿದಾಗ ಆಧಾರ್ ಕಾರ್ಡ್ ದೊರೆತಿದ್ದು, ಅದರಲ್ಲಿ ಕೊರಟಕೂಡಿ ಇಸ್ಮಾಯಿಲ್ (70) ತಂದೆ ಕುಂಜಾವರ್ ನರಿಯಂದಡ ಚೆಯ್ಯಂಡಾಣೆ ಎಂಬ ವಿಳಾಸ ದೊರೆತಿದೆ.

ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾ ಶವಗಾರದಲ್ಲಿ ಇರಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಾಪೆÇೀಕ್ಲು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೆÇಲೀಸ್ ಠಾಣಾಧಿಕಾರಿ ನಂಜುಂಡ ಸ್ವಾಮಿ ತಿಳಿಸಿದ್ದಾರೆ.