*ಗೋಣಿಕೊಪ್ಪಲು, ಫೆ. 20: ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ತಾಲೂಕು ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.

ತಿತಿಮತಿ-ಮರೂರು ಆಶ್ರಮ ಶಾಲೆಯಲ್ಲಿ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಪಂಗಡ ಇಲಾಖೆ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವಭಾವಿ ತಯಾರಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾಗಲು ಕಾರ್ಯಾಗಾರದ ಸದುಪಯೋಗ ಪಡೆಸಿಕೊಳ್ಳಿ ಸಂಪನ್ಮೂಲ ವ್ಯಕ್ತಿಗಳು ನೀಡಿದ ಸಲಹೆಯನ್ನು ಪಾಲಿಸಿದರೆ ಪ್ರತಿಯೊಬ್ಬರು ಯಾವದೇ ಭಯವಿಲ್ಲದೆ ಪರೀಕ್ಷೆ ಎದುರಿಸದೆ ಬಹುದು ಎಂದು ಸಲಹೆ ನೀಡಿದರು.

ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಕಾರ್ಯಾಗಾರ ನಡೆಯಿತು. ಶಿಕ್ಷಕರುಗಳಾದ ತಿಮ್ಮಯ್ಯ ಹಾಗೂ ಕಾವೇರಮ್ಮ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿ ನೀಡಿದರು.

ಜಿ.ಪಂ. ಸದಸ್ಯೆ ಪಂಕಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳು ಮನೋಧೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು. ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ತಾ.ಪಂ. ಸದಸ್ಯೆ ಆಶಾ ಜೇಮ್ಸ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.