ಸಿದ್ದಾಪುರ, ಫೆ. 20: ಇತ್ತೀಚೆಗೆ ಕಾಶ್ಮೀರದ ಪುಲ್ವಾಮದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಹಾಗೂ ಇತ್ತೀಚೆಗೆ ಸಿದ್ದಾಪುರದ ಎಮ್ಮೆಗುಂಡಿ ಕಾಫಿ ತೋಟದೊಳಗೆ ಹೊರ ರಾಜ್ಯದ ಕಾರ್ಮಿಕರಿಂದ ಹತ್ಯೆಯಾದ ವಿದ್ಯಾರ್ಥಿನಿ ಸಂಧ್ಯಾಳಿಗೆ ಜಿಲ್ಲಾ ಎಸ್.ಎನ್.ಡಿ.ಪಿ. ಯೂನಿಯನ್ ವತಿಯಿಂದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸಿದ್ದಾಪುರದಲ್ಲಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಎನ್.ಡಿ.ಪಿ. ಯೂನಿಯನ್ ಸಂಚಾಲಕ ಕೆ.ಎನ್. ವಾಸು, ಅಧ್ಯಕ್ಷ ಕೆ.ಜಿ. ಬಾಲಕೃಷ್ಣ ಹಾಗೂ ಪದಾಧಿಕಾರಿಗಳು ಹಾಜರಿದ್ದರು.