ಕೂಡಿಗೆ: ಜಿಲ್ಲಾ ಪಂಚಾಯಿತಿಯ ರೂ. 6.5 ಲಕ್ಷ ಅನುದಾನದಲ್ಲಿ ಮುಳ್ಳುಸೋಗೆ, ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬಡಾವಣೆಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎಸ್. ರುದ್ರಾಂಬಿಕೆ, ಸಂತೋಷ್, ಪಾರ್ವತಿ, ಜಯಂತಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಕೆ. ಚೆಲುವರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣಪತಿ, ಹೆಲೆನ್ ಮೆಟೆಲ್ಡಾ, ಸುನಿಲ್, ಕುಮಾರ, ಭಾರತಿ, ಸಂಗೀತ ಮತ್ತಿತರರು ಇದ್ದರು.ಕೂಡಿಗೆ: ಇಲ್ಲಿಗೆ ಸಮೀಪದ ಐಗೂರು ಗ್ರಾಮ ಪಂಚಾಯಿತಿಯ ಯಡವನಾಡು ಗ್ರಾಮದಲ್ಲಿರುವ ಗಿರಿಜನ ಆಶ್ರಮ ವಸತಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಜಿಲ್ಲಾ ಪಂಚಾಯತ್ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯೆ ಸಬಿತಚನ್ನಕೇಶವ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶಿವಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್ ಸೇರಿದಂತೆ ಗಿರಿಜನ ವಸತಿ ಶಾಲೆಯ ಶಿಕ್ಷಕ ವೃಂದ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಇದ್ದರು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದ ಸಮೀಪವಿರುವ ಸೀತಾ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಯಡಿಯಲ್ಲಿ 20 ಮನೆಗಳ ನಿರ್ಮಾಣಕ್ಕೆ ಹಣ ಮಂಜೂರಾಗಿದೆ. ಫಲಾನುಭವಿಗಳ ಆಯ್ಕೆಯೂ ಆಗಿದ್ದು, ಫಲಾನುಭವಿಗಳು ತಮಗೆ ಗುರುತಿಸಿದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ತಳಪಾಯದ ಕಾಮಗಾರಿಗೆ ಸಿದ್ಧರಾಗಿದ್ದಾರೆ.
ಈ ಸಂದರ್ಭ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್ ಸುದ್ಧಿಗಾರರೊಂದಿಗೆ ಮಾತನಾಡಿ, ತಾಲೂಕಿನ ಗಿರಿಜನ ಹಾಡಿಗಳಿಗೆ ಮನೆಗಳು ಮಂಜೂರಾಗಿರುವ ಫಲಾನುಭವಿಗಳಿಗೆ ಹಂತ ಹಂತವಾಗಿ ಮನೆ ನಿರ್ಮಾಣದ ಹಣವನ್ನು ನೀಡಲಾಗುವದು. ಒಂದು ಮನೆಗೆ ರೂ. 2 ಲಕ್ಷ ಹಣವನ್ನು ಸರ್ಕಾರ ನಿಗದಿಪಡಿಸಿದೆ. ಮನೆಯ ಶೌಚಾಲಯವನ್ನು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ನಿರ್ಮಿಸಿಕೊಳ್ಳುವ ಯೋಜನೆಯಿದ್ದು, ಅದನ್ನು ಫಲಾನುಭವಿಗಳು ಸದ್ಬಳಸಿಕೊಳ್ಳುವಂತೆ ಮಾಹಿತಿ ನೀಡಲಾಗಿದೆ ಎಂದರು.