ನಾಪೋಕ್ಲು, ಫೆ. 20: 2018-19ರ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ತಾ. 23 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಮಡಿಕೇರಿಯಲ್ಲಿ ಪೂರ್ವಾಹ್ನ 10 ಗಂಟೆಯಿಂದ 12.30ರ ವರೆಗೆ ವಿತರಿಸಲಾಗುವದು. ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಮನವಿ ಮಾಡಿದ್ದಾರೆ.