ಮಡಿಕೇರಿ, ಫೆ. 20: ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್‍ನ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಧ್ಯಾಪಕ ಪ್ರೊ ಬಿ.ಆರ್. ಶಶಿಧರ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಭಾವೈಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲೆ ಚೈತ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ.ಸಿ. ದಯಾನಂದ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.