ಗೋಣಿಕೊಪ್ಪ ವರದಿ, ಫೆ. 21: ಪಾಲಿಬೆಟ್ಟ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗೋಣಿಕೊಪ್ಪ ರೋಟರಿ ಹಾಗೂ ಹಳೇಯ ವಿದ್ಯಾರ್ಥಿ ಸಂಘದಿಂದ ನಿರ್ಮಿಸಿ ರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ನೀರನ್ನು ಬಳಕೆ ಮಾಡುವ ಮೂಲಕ ಉದ್ಘಾಟಿಸಿದರು.
ಗೋಣಿಕೊಪ್ಪ ರೋಟರಿ ಅಧ್ಯಕ್ಷ ಪಾರುವಂಗಡ ದಿಲನ್ ಚೆಂಗಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆಗೆ ಹೆಚ್ಚಿನ ಆಧ್ಯತೆಯನ್ನು ರೋಟರಿ ಸಂಸ್ಥೆ ನೀಡುತ್ತಿದೆ. ಶುದ್ಧ ಕುಡಿಯುವ ನೀರು ವಿದ್ಯಾರ್ಥಿಗಳಿಗೆ ಹೆಚ್ಚಿನ ಉಪಯೋಗವಾಗಲಿದೆ ಎಂದರು.
ಈ ಸಂದರ್ಭ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯ ನರಸಿಂಹ, ತಾ.ಪಂ. ಸದಸ್ಯ ಅಜಿತ್ ಕರುಂಬಯ್ಯ, ಮುಖ್ಯ ಶಿಕ್ಷಕಿ ವಿಮಲ, ನಿವೃತ್ತ ಮುಖ್ಯ ಶಿಕ್ಷಕಿ ಹೇಮಾವತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ. ಸೈದು ಉಪಸ್ಥಿತರಿದ್ದರು.