ಸೋಮವಾರಪೇಟೆ, ಫೆ. 21: ಸಮೀಪದ ಕೊತ್ತನಳ್ಳಿ ಗ್ರಾಮದ ಶ್ರೀ ಕೃಷ್ಣ ಯುವಕ ಸಂಘದ ವತಿಯಿಂದ ತಾ. 24 ರಂದು ಕೊತ್ತನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಟಿ. ದಿನೇಶ್ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಗುಡ್ಡಗಾಡು ಓಟ, ಮಹಿಳೆಯರಿಗೆ ಥ್ರೋಬಾಲ್, ರಂಗೋಲಿ, ವಯಸ್ಕ ಪುರುಷರು ಮತ್ತು ಮಹಿಳೆಯರಿಗೆ ಡ್ರಂಗೆ ಬಾಲ್ ಹಾಕುವದು, ಬಾಲಕಿಯರಿಗೆ 200 ಮೀಟರ್ ಓಟದ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ತಾ. 24 ರಂದು ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಎಂ.ಟಿ. ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಎಪಿಎಂಸಿ ಸದಸ್ಯ ಕೆ.ಕೆ. ಗೋಪಾಲ್, ಶಾಂತಳ್ಳಿ ವಿಎಸ್‍ಎಸ್‍ಎನ್ ಅಧ್ಯಕ್ಷ ಕೆ.ಎಸ್. ದಿನೇಶ್, ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಚಂದ್ರಿಕಾ, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಬಿ. ಈರಪ್ಪ ಭಾಗವಹಿಸಲಿದ್ದಾರೆ ಎಂದರು.

ಅಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದ್ದು, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಾಜಿ ಎಂಎಲ್‍ಸಿ ಎಸ್.ಜಿ. ಮೇದಪ್ಪ, ಮಾಜಿ ತಾ.ಪಂ. ಸದಸ್ಯ ಲೋಕೇಶ್, ಗ್ರಾ.ಪಂ. ಅಧ್ಯಕ್ಷರುಗಳಾದ ಅನಿಲ್‍ಕುಮಾರ್, ಪವಿತ್ರ, ಪಿಡಿಓ ತಮ್ಮಯ್ಯ, ಸದಸ್ಯ ಯೋಗೇಶ್, ಉದ್ಯಮಿಗಳಾದ ಗಿರೀಶ್ ಮಲ್ಲಪ್ಪ, ಅರುಣ್ ಕೊತ್ನಳ್ಳಿ ಅವರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.