ಗೋಣಿಕೊಪ್ಪ ವರದಿ, ಫೆ. 21: ತಾ. 24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಮಾಡಲಾಗಿದೆ ಎಂದು ಕೆವಿಕೆ ಪ್ರಕಟಣೆ ತಿಳಿಸಿದೆ.