ಸೋಮವಾರಪೇಟೆ, ಫೆ. 21: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ದಿ. ಸುನಿಲ್ ಸ್ಮಾರಕ ಪತ್ರಕರ್ತರ ನಡುವಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಎ. ಮುರುಳೀಧರ್, ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸಿದ ಕುಶಾಲನಗರದ ಶಿವರಾಜ್, ಸೋಮವಾರಪೇಟೆ ತಂಡದ ಡಿ.ಪಿ. ಲೋಕೇಶ್, ವೀರಾಜಪೇಟೆಯ ಮಂಜುನಾಥ್ ಅವರುಗಳನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ದಿ. ಸಿ.ಎನ್. ಸುನಿಲ್ಕುಮಾರ್ ಅವರ ಪುತ್ರಿ, ಸದ್ಯ ಕೇರಳದಲ್ಲಿ ವ್ಯಾಸಂಗ ಮಾಡುತ್ತಿರುವ ಸುಶ್ಮಿನಿ ಅವರನ್ನು ಸನ್ಮಾನಿಸಿ, ವಿದ್ಯಾಭ್ಯಾಸಕ್ಕೆ ರೂ. 10 ಸಾವಿರ ಪ್ರೋತ್ಸಾಹ ಧನ ವಿತರಿಸಲಾಯಿತು.
ಈ ಸಂದರ್ಭ ಶಾಸಕ ಅಪ್ಪಚ್ಚು ರಂಜನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ. ಯಾಕೂಬ್, ಮಾದಾಪುರ ಗ್ರಾ.ಪಂ. ಸದಸ್ಯ ನಾಪಂಡ ಉಮೇಶ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಉದ್ಯಮಿ ಅರುಣ್ ಕಾಳಪ್ಪ, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ಚಂಗಪ್ಪ, ಸೋಮವಾರ ಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್, ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.