ಕುಶಾಲನಗರ, ಫೆ. 21: ಕುಶಾಲನಗರ ಪಟ್ಟಣ ಪಂಚಾಯಿತಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಈ ಹಿನ್ನೆಲೆ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡಿದೆ.

ಪಟ್ಟಣದ ಹೃದಯ ಭಾಗದಲ್ಲಿ ಅಂದಾಜು ರೂ. 7.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಪ್ರಥಮ ಹಂತದಲ್ಲಿ ರೂ. 4.5 ಕೋಟಿ ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಕುಶಾಲನಗರ ಪ.ಪಂ. ಮುಖ್ಯಾಧಿಕಾರಿ ಸುಜಯ್ ಕುಮಾರ್ ತಿಳಿಸಿದ್ದಾರೆ.

ಕಟ್ಟಡ ಕಾಮಗಾರಿಗೆ ಈ ಹಿಂದೆ ಮುಖ್ಯಮಂತ್ರಿಗಳು ಮಡಿಕೇರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದು, ಮುಂದಿನ 1 ವರ್ಷದ ಅವಧಿಯೊಳಗೆ ನೂತನ ವಾಣಿಜ್ಯ ಸಂಕೀರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.