ನಾಪೆÉÇೀಕ್ಲು, ಫೆ. 21: ವಿದ್ಯಾರ್ಥಿಗಳು ವಿದ್ಯೆಯನ್ನು ಇಷ್ಟಪಟ್ಟು ಕಲಿತರೆ ಮಾತ್ರ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ನಾಪೆÇೀಕ್ಲು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಯೋಜನೆಯಡಿಯಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಬದುಕಿನಲ್ಲಿ ಶಿಸ್ತು ಪ್ರಮುಖವಾದದ್ದು. ವಿದ್ಯಾರ್ಥಿ ದಿಸೆಯಲ್ಲಿಯೇ ಶಿಸ್ತು ಮತ್ತು ಸಮಯ ಪಾಲನೆಗೆ ಮಹತ್ವ ನೀಡಿದರೆ ಉತ್ತಮ ಸಾಧನೆ ಸಾಧ್ಯ ಎಂದರು.

ಇತ್ತೀಚಿನ ಆಧುನಿಕ ಬದುಕಿನಲ್ಲಿ ಗುರು ಹಿರಿಯರ ಬಗ್ಗೆ ಗೌರವ ಕಡಿಮೆಯಾಗುತ್ತಿರುವದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಗುರು ಹಿರಿಯರಿಗೆ ಗೌರವ ನೀಡುವದನ್ನು ಎಂದಿಗೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಮಕ್ಕಳು ಮೊಬೈಲ್ ಮತ್ತು ಟಿವಿಯಲ್ಲಿ ಬರುವ ಉತ್ತಮ ವಿಷಯಗಳ ಬಗ್ಗೆ ಮಾತ್ರ ಗಮನಹರಿಸಬೇಕು ಎಂದು ಹೇಳಿದ ಅವರು ಅತಿಯಾದರೆ ಅಮೃತವೂ ವಿಷವಾಗುತ್ತದೆ ಎಂದರು. ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಶಿಕ್ಷಕರು ಹೆಚ್ಚಿನ ಶ್ರಮ ವಹಿಸುತ್ತಾರೆ. ಪೆÇೀಷಕರು ಇದಕ್ಕೆ ಬೆಂಬಲವಾಗಿರಬೇಕು ಎಂದು ಸಲಹೆ ನೀಡಿದರು.

ವಸ್ತು ಪ್ರದರ್ಶನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಯಾವದೇ ಒಂದು ರಾಷ್ಟ್ರ ಮುಂದುವರಿಯಬೇಕಾದರೆ, ಅಭಿವೃದ್ಧಿ ಹೊಂದಬೇಕಾದರೆ ಶೈಕ್ಷಣಿಕ ಪ್ರಗತಿ ಅಗತ್ಯವಾಗಿದೆ ಎಂದರು.

ಶಿಕ್ಷಣ ಇಲಾಖೆಯ ಉಪನಿದೇರ್ಶಕ ಪಿ.ಎಸ್. ಮಚ್ಚಾಡೋ ಮಾತನಾಡಿ, ವಿದ್ಯಾವಂತರಾಗುವದು ಕಷ್ಟವಲ್ಲ. ಕಠಿಣ ಪರಿಶ್ರಮದಿಂದ ಎಲ್ಲವನ್ನು ಸಾಧಿಸಬಹುದಾಗಿದೆ. ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸೂಕ್ತ ತಯಾರಿ ನಡೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದ ಇಂದಿರಾ ಹರೀಶ್, ಉಮಾ ಪ್ರಭು, ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಸದಸ್ಯ ಮಾಚೆಟ್ಟಿರ ಕುಶು ಕುಶಾಲಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಎಂ. ಅಬ್ದುಲ್ಲ, ಸಮನ್ವಯಾಧಿಕಾರಿ ಬೆಟ್ಟ ನಾಯಕ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ, ವೆಂಕಟೇಶ್, ಕಾತ್ಯಾಯನಿ ಮತ್ತಿತರರು ಇದ್ದರು.

ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಪ್ರಬಾರ ಉಪಪ್ರಾಂಶುಪಾಲೆ ಪಿ.ಕೆ. ನಳಿನಿ ಸ್ವಾಗತ, ಶಿಕ್ಷಕ ಮಹಂತೇಶ್ ನಿರೂಪಿಸಿ, ಶಿಕ್ಷಕಿ ಉಷಾರಾಣಿ ವಂದಿಸಿದರು.