ಸಿದ್ದಾಪುರ, ಫೆ. 23: ಚೆನ್ನಯ್ಯನಕೋಟೆ ಸಾಗರ್ ಫ್ರೆಂಡ್ಸ್ ವತಿಯಿಂದ ಏಪ್ರಿಲ್ 19 ರಿಂದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿರುವದಾಗಿ ಸಂಘದ ಅಧ್ಯಕ್ಷ ಹುರೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ವತಿಯಿಂದ 14ನೇ ವರ್ಷದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಚೆನ್ನಯ್ಯನಕೋಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏಪ್ರಿಲ್ 19 ರಿಂದ 21 ರವರೆಗೆ ಆಯೋಜಿಸಲಾಗಿದೆ.
ಪಂದ್ಯಾವಳಿಯಲ್ಲಿ 32 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 5 ರೊಳಗೆ ಭಾಗವಹಿಸಲು ಇಚ್ಛಿಸುವ ತಂಡಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ ಎಂದು ಮಾಹಿತಿ ನೀಡಿದರು. ತಂಡಗಳು 9900385990 9741917874 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ರತೀಶ್, ಉಪಾಧ್ಯಕ್ಷ ಎಂ.ಎನ್. ವಿಜು, ಕಾರ್ಯದರ್ಶಿ ನೌಫಲ್, ಕೋಶಾಧಿಕಾರಿ ಹರೀಶ್ ಹಾಗೂ ಸದಸ್ಯ ಕಾರ್ಯಪ್ಪ ಇದ್ದರು.